ಲೋಕಸಭೆ ಚುನಾವಣೆಗೆ ಇನ್ನೆನ್ನು ಕೆಲ ತಿಂಗಳು ಮಾತ್ರವೇ ಭಾಕಿ ಇದೆ. ಈ ಮಧ್ಯೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಗವರ್ನರ್ಗೆ ಸಲ್ಲಿಸಿದ್ದಾರೆ.
ಹರಿಯಾಣದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) ಯ ಆಡಳಿತ ಸಮ್ಮಿಶ್ರದಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಖಟ್ಟರ್ ತಮ್ಮ ಸ್ಥಾನವನ್ನು ತ್ಯಜಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲು ಉಭಯ ಪಕ್ಷಗಳು ವಿಫಲವಾದ ಕಾರಣ ಹರಿಯಾಣದಲ್ಲಿ ಬಿಜೆಪಿ ಮತ್ತು ಜೆಜೆಪಿ ನಡುವಿನ ಮೈತ್ರಿ ಮುರಿದು ಬೀಳುವ ಹಂತದಲ್ಲಿದೆ. ಈ ನಡುವೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದು, ಅವರ ಸಂಪುಟದ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ.