ಶಿವಮೊಗ್ಗ: ಚುನಾವಣೆಯ ರಂಗು ಜೋರಾಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ (Shivarajkumar) ಅವರು ಕಾಂಗ್ರೆಸ್ ಪರ ಪ್ರಚಾರ ಮಾಡ್ತಿದ್ದಾರೆ. ‘ಕೈ’ಗೆ ಶಿವಣ್ಣ ಸಾಥ್ ಕೊಡ್ತಿದ್ದಂತೆ ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದರು. ಇದೀಗ ಈ ಬಗ್ಗೆ ನಟ ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಶಿವಣ್ಣ ಅವರು ಸಿದ್ದರಾಮಯ್ಯ ಪರ ಭರ್ಜರಿಯಾಗಿ ಪ್ರಚಾರ ಮಾಡ್ತಿದ್ದಾರೆ. ಗೀತಾ ಶಿವರಾಜ್ಕುಮಾರ್- ಮಧು ಬಂಗಾರಪ್ಪ ಜೊತೆಗೂಡಿ ಚುನಾವಣಾ ಅಖಾಡದಲ್ಲಿ ಶಿವಣ್ಣ ಪ್ರಚಾರ ಜೋರಾಗಿಯೇ ನಡೆಯುತ್ತಿದೆ. ಹೀಗಿರುವಾಗ ಬಿಜೆಪಿ ನಾಯಕರ (Bjp) ಅಸಮಾಧಾನಕ್ಕೆ ನಟ ರಿಯಾಕ್ಟ್ ಮಾಡಿದ್ದಾರೆ.
ಈ ಬಾರಿ ಸ್ಯಾಂಡಲ್ ವುಡ್ ಅನೇಕ ಕಲಾವಿದರು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಸುದೀಪ್ ಹತ್ತಾರು ಕ್ಷೇತ್ರಗಳಿಗೆ ಹೋಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ. ಇನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Dr Shivaraj Kumar)ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಿಳಿದಿದ್ದಾರೆ. ಮೊನ್ನೇ ಅಷ್ಟೇ ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಜೊತೆ ವೇದಿಕೆ ಹಂಚಿಕೊಂಡಿದ್ದ ಶಿವಣ್ಣ, ನಾನು ರಾಹುಲ್ ಗಾಂಧಿ ಅವರ ಅಭಿಮಾನಿ, ಅವರನ್ನು ನೋಡಬೇಕು ಎಂಬ ಆಸೆ, ಪ್ರೀತಿಯಿಂದ ಇಲ್ಲಿಗೆ ಬಂದಿದ್ದೇನೆ. ರಾಹುಲ್ ಗಾಂಧಿ ಒಳ್ಳೆಯ ಉದ್ದೇಶಕ್ಕಾಗಿ ಭಾರತ್ ಜೋಡೋ ಯಾತ್ರೆ ಮಾಡಿದ್ದು, ನನಗೆ ಅತ್ಯಂತ ಸ್ಫೂರ್ತಿದಾಯಕವಾಗಿತ್ತು. ಎಂದು ಹೇಳಿದ್ದರು. ಇದು ಕಾಂಗ್ರೆಸ್ಗೆ ಹೊಸ ಉರುಪು ತಂದಿತ್ತು. ಇದರ ಬೆನ್ನಲ್ಲೇ ಇದೀಗ ಶಿವರಾಜ್ ಕುಮಾರ್, ರಾಹುಲ್ ಗಾಂಧಿ ಫಿಟ್ನೆಸ್ಗೆ ಫಿದಾ ಆಗಿದ್ದಾರೆ.
ವರುಣದಲ್ಲಿ ಪ್ರಚಾರ ಚೆನ್ನಾಗಿ ನಡೆಯಿತು. ಇವತ್ತು ಮುಂಡುಗೋಡು, ಶಿರಸಿಯಲ್ಲಿ ಪ್ರಚಾರ ಮಾಡ್ತೀನಿ ಎಂದು ತಮ್ಮ ಮುಂದಿನ ನಡೆ ಬಗ್ಗೆ ಶಿವಣ್ಣ ಅಪ್ಡೇಟ್ ನೀಡಿದ್ದರು. ಸಚಿವ ಸೋಮಣ್ಣ- ಪ್ರತಾಪ ಸಿಂಹ ಅವರು ನಮಗೆ ಒಳ್ಳೆಯ ಆಪ್ತರು. ಅವರ ಬಗ್ಗೆ ಒಳ್ಳೆಯ ಗೌರವವಿದೆ. ನಾನು ಏನು ಚಿಕ್ಕ ಹುಡುಗನಾ ನನಗೆ ಈಗ 61 ವರ್ಷ ಆಯ್ತು. ನನಗೆ ಯಾರು ವೈರಿಗಳಿಲ್ಲ. ಎಲ್ಲರೂ ನನ್ನ ಸ್ನೇಹಿತರೇ ಆಗಿದ್ದಾರೆ. ಇನ್ನೂ ರಾಹುಲ್ ಗಾಂಧಿ (Rahul Gandhi) ಅವರನ್ನ ಮೀಟ್ ಮಾಡಬೇಕು ಅಂತಾ ಮೊದಲಿನಿಂದಲೂ ನನಗೆ ಆಸೆ ಇತ್ತು. ಮೊನ್ನೆಯಷ್ಟೇ ಅವರನ್ನ ಮೀಟ್ ಮಾಡಿದೆ, ರಾಹುಲ್ ಗಾಂಧಿ ಅವರ ಫಿಟ್ನೆಸ್ ಇಷ್ಟ ಆಯ್ತು. ಹಾಗಾಗಿ ಅವರ ಬಗ್ಗೆ ಇಂಪ್ರೆಸ್ ಆಯ್ತು ಎಂದು ಶಿವಣ್ಣ ಖುಷಿಯಿಂದ ಮಾತನಾಡಿದರು. ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷದವರು ಯಾರು ಪ್ರಚಾರಕ್ಕೆ ನನ್ನನ್ನು ಕರೆದಿರಲಿಲ್ಲ. ಯಾರಾದರೂ ಕರೆದಿದ್ದರೆ ಅವರ ಪರ ಪ್ರಚಾರಕ್ಕೆ ನಾನು ಹೋಗುತ್ತಿದ್ದೆ. ಮೊದಲಿನಿಂದಲೂ ಸಿನಿಮಾದಲ್ಲಿ ಬ್ಯುಸಿಯಾಗಿದ್ದೆ, ಈಗ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದೀನಿ ಎಂದು ಶಿವಣ್ಣ ಮಾತನಾಡಿದರು.
ಮೊನ್ನೇ ಮಂಗಳವಾರ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಬಾಳೇಬೈಲಿನಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಶಿವರಾಜ್ ಕುಮಾರ್ ಅವರು ಭಾಗವಹಿಸಿದ್ದರು. ಅಲ್ಲದೇ ರಾಹುಲ್ ಗಾಂಧಿ ಅವರನ್ನು ಹಾಡಿಹೊಗಳಿದ್ದರು. ರಾಹುಲ್ ಶಿವರಾಜ್ ಕುಮಾರ್ ಅವರೊಂದಿಗೆ ಸ್ವಲ್ಪ ಹೊತ್ತು ಮಾತಾಡಿ ಭಾಷಣ ಮಾಡಿದ್ದು, ರಾಹುಲ್ ಗಾಂಧಿ ಅಭಿಮಾನಿಯಾಗಿ ನಾನು ಇಂದು ಇಲ್ಲಿಗೆ ಬಂದಿದ್ದೇನೆ. ಇತ್ತೀಚೆಗೆ ಅವರು ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ನನ್ನನ್ನು ಬಹಳ ಹಿಡಿಸಿತ್ತು. ನಾನು ಕೂಡ ವರ್ಕೌಟ್, ಫಿಟ್ನೆಸ್ ಗೆ ಪ್ರಾಮುಖ್ಯತೆ ನೀಡುತ್ತೇನೆ. ಭಾರತ್ ಜೋಡೋ ಯಾತ್ರೆಯಲ್ಲಿ ಸಾವಿರಾರು ಮೈಲುಗಳನ್ನು ರಾಹುಲ್ ಗಾಂಧಿ ನಡೆದು ಕ್ರಮಿಸಿದ್ದಾರೆ. ಅವರ ಯಾತ್ರೆ ನನಗೆ ಬಹಳ ಪ್ರೇರೇಪಿಸಿತು ಎಂದಿದ್ದರು. ಇದು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ಗೆ ಹೊಸ ಉರುಪು ತಂದಿದ್ದು, ಈ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ ಕೆಲ ಬಿಜೆಪಿ ಕಾರ್ಯಕರ್ತರು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು.