ಬೆಂಗಳೂರು: ಜೆಡಿಎಸ್ ಗೆ ರಾಜೀನಾಮೆ ನೀಡಿರುವ ಎ.ಟಿ.ರಾಮಸ್ವಾಮಿ ಅವರು ಬಿಜೆಪಿ ಬರುತ್ತಾರೆ ಎಂದು ಅಬಕಾರಿ ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ನಲ್ಲಿ ಮಾತನಾಡಿದ ಅವರು, ನೂರಕ್ಕೆ ನೂರರಷ್ಟು ಅವರು ಬಿಜೆಪಿಗೆ ಬರುವರು. ನಾನೇ ಖುದ್ದಾಗಿ ದೆಹಲಿಗೆ ಕರೆದೊಯ್ದು ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ಮಾಡಿ ತಮ್ಮ ಪಕ್ಷಕ್ಕೆ ಬರಮಾಡಿಕೊಳ್ಳುವುದಾಗಿ ಮಾಹಿತಿ ನೀಡಿದರು.
ಪ್ರತಿದಿನ ಮುಖಂಡರ ಜೊತೆ ಬಿಜೆಪಿಗೆ ಮತವನ್ನು ಕೇಳುತ್ತಿದ್ದೇವೆ. ಮನೆ ಮನೆಗೆ ಭೇಟಿ ನೀಡಿ ಹಾಗೂ ಬೂತ್ ಮಟ್ಟದ ಸಭೆಗಳನ್ನು ನಡೆಸುತ್ತಿದ್ದೇವೆ. ಕ್ಷೇತ್ರದ ಜನರಿಗಾಗಿ ನಾನು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ನನ್ನ ಕೆಲಸ ಕಾರ್ಯವನ್ನು ಜನ ಗುರುತಿಸಿದ್ದಾರೆ. ನನಗೆ ಉತ್ತಮ ಮಟ್ಟದಲ್ಲಿ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಇದೇ ವೇಳೆ ಸಚಿವರು ಕ್ಷೇತ್ರದ ಜನರನ್ನು ಪ್ರಶಂಸಿಸಿದರು.