ನವದೆಹಲಿ: ರಾಜ್ಯದ ಹೆದ್ದಾರಿ ಯೋಜನೆಗಳು, ಅದರಲ್ಲಿ ಮುಖ್ಯವಾಗಿ ಶಿರಾಡಿ ಘಾಟ್ ರಸ್ತೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕೇಂದ್ರದ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಜತೆ ಮಾತುಕತೆ ನಡೆಸಿದರು.
ಈ ವೇಳೆ ಮಾಜಿ ಪ್ರಧಾನಿಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು; ಕರ್ನಾಟಕ ಸರಕಾರ ಅಲ್ಪ ಪ್ರಮಾಣದ ಅರಣ್ಯ ಭೂಮಿ ನೀಡಿದರೆ ಶಿರಾಡಿ ಘಾಟ್ ರಸ್ತೆಯನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರಕಾರ ಸಿದ್ಧವಿದೆ ಎಂದು ತಿಳಿಸಿದರು.
ಅಲ್ಲದೆ; ಈ ಯೋಜನೆಗೆ ಕೆಲವು ಸಾವಿರ ಕೋಟಿಗಳಷ್ಟು ಹಣ ಹೂಡಿಕೆ ಮಾಡಲು ತಮ್ಮ ಇಲಾಖೆ ಪರಿಗಣಿಸುವುದು ಎಂದು ನಿತಿನ್ ಗಡ್ಕರಿ ಅವರು ಮಾಜಿ ಪ್ರಧಾನಿಗಳಿಗೆ ಭರವಸೆ ನೀಡಿದರು.
ಅಭಿವೃದ್ಧಿ ಯೋಜನೆಯು ಸುರಂಗ ತಂತ್ರಜ್ಞಾನ ಬಳಸುವುದನ್ನು ಒಳಗೊಂಡಿರುತ್ತದೆ. ರಾಜ್ಯ ಸರಕಾರ ಕೇಂದ್ರಕ್ಕೆ ಸ್ಪಂದಿಸಬೇಕು ಎಂದು ಸಚಿವರು ಹೇಳಿದ್ದಾರೆ. ಈ ಮಾಹಿತಿಯನ್ನು ಮಾಜಿ ಪ್ರಧಾನಿಗಳು ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.