ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿತಕ್ಕೆ ಸಂಬಂಧಿಸಿ ಸಕಲೇಶಪುರ ದೊಡ್ಡತಪ್ಪಲು ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿದ್ದಾರೆ. ಹೆಚ್ಡಿಕೆಗೆ ಶಾಸಕರುಗಳಾದ ಸಿಮೆಂಟ್ ಮಂಜು, ಹೆಚ್.ಪಿ.ಸ್ವರೂಪ್ಪ್ರಕಾಶ್, ಸಿ.ಎನ್.ಬಾಲಕೃಷ್ಣ, ಹೆಚ್.ಕೆ.ಸುರೇಶ್ ಸಾಥ್ ನೀಡಿದ್ದಾರೆ.
ಡಿಸಿ ಸತ್ಯಭಾಮ, ಎಸ್ಪಿ ಮಹಮದ್ ಸುಜೇತಾ, ಎಸಿ ಶೃತಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.
ಎಂಟು ವರ್ಷದ ಹಿಂದಿನಿಂದ ಗುತ್ತಿಗೆದಾರ ಕೆಲಸ ಮಾಡುತ್ತಿದ್ದಾನೆ. ಕಳಪೆ ಹಾಗೂ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಲಾಗುತ್ತಿದೆ. ಕೇಂದ್ರದ ಭೂಸಾರಿಗೆ ಸಚಿವರಿಗೆ ಎಲ್ಲಾ ಮಾಹಿತಿ ಕೊಡುತ್ತೇನೆ. ಗಡ್ಕರಿ ಅವರ ಪಾತ್ರವೂ ಜಾಸ್ತಿ ಇದೆ. ವೈಜ್ಞಾನಿಕವಾಗಿ ಕಾಮಗಾರಿ ಮಾಡಲು ಗಡ್ಕರಿ ಅವರ ಜೊತೆ ಚರ್ಚೆ ಮಾಡುತ್ತೇನೆ. ಸ್ಥಳಕ್ಕೆ ಒಮ್ಮೆ ಭೇಟಿ ನೀಡಲು ಮನವಿ ಮಾಡುತ್ತೇನೆ. ರಾಜ್ಯ ಸರ್ಕಾರದ ಮಂತ್ರಿಗಳು ಭೇಟಿ ನೀಡಿ ಜನಗಳಿಗೆ ಮಾನಸಿಕವಾಗಿ ಧೈರ್ಯ ತುಂಬಬೇಕು. ಆದ್ದರಿಂದ ನಾನು ನಿನ್ನೆಯಿಂದ ಭೇಟಿ ನೀಡುತ್ತಿದ್ದೇನೆ ಎಂದರು.