ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಮತದಾನ(Voting) ಮುಗಿದಿದ್ದು ಕೆಲವೇ ಗಂಟೆಗಳಲ್ಲಿ ರಾಜಕೀಯ ನಾಯಕರ ಭವಿಷ್ಯ ಹೊರಬೀಳಲಿದೆ. ಮತದಾನ ಮುಗಿಯುತ್ತಿದ್ದಂತೆ ನಾಯಕರು ರಿಲಾಕ್ಸ್ ಮೂಡಿಗೆ ಜಾರಿದ್ದು ಮತ್ತೊಂದೆಡೆ ಬಹುಮತ ಬರದಿದ್ದರೆ ಕಿಂಗ್ ಮೇಕರ್ ಜೆಡಿಎಸ್ ಪಕ್ಷದ ಮೊರೆ ಹೋಗಬೇಕೆಂದು ಬಿಜೆಪಿ,
ಕಾಂಗ್ರೆಸ್ ಒಳಗೊಳಗೆ ಕಸರತ್ತು ಶುರು ಮಾಡಿದೆ. ಸದ್ಯ ನನಗೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಯಾವುದೇ ಅಸಮಾಧಾನವಿಲ್ಲ. ನಮ್ಮ ಷರತ್ತುಗಳನ್ನು ಯಾವ ಪಕ್ಷ ಪೂರೈಸುತ್ತದೆ ಎಂಬುದರ ಆಧಾರದ ಮೇಲೆ ಬಿಜೆಪಿ ಅಥವಾ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದನ್ನು ನಿರ್ಧರಿಸುತ್ತೇವೆ. ಮೈತ್ರಿಗೆ ನಾವು ಸಿದ್ಧ ಎಂದು ಹೆಚ್ಡಿ ಕುಮಾರಸ್ವಾಮಿ(HD Kumaraswamy) ತಿಳಿಸಿದ್ದಾರೆ.
ಬುಧವಾರ ಮತದಾನ ನಡೆದ ದಿನದಂದು 10 ಎಕ್ಸಿಟ್ ಪೋಲ್ಗಳು ಹೊರಬಿದ್ದಿದ್ದವು ಈ ಪೈಕಿ ಬಹುತೇಕ ಸಮೀಕ್ಷೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುತ್ತೆ ಎಂದು ಭವಿಷ್ಯ ಹೊರ ಬಿದ್ದಿದೆ. ಮತ್ತೊಂದೆಡೆ ನಾವೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲೇ ಬಿಜೆಪಿ ಕಾದು ಕುಳಿತಿದೆ. ಹೀಗಾಗಿ ಜೆಡಿಎಸ್ ಪಕ್ಷದ ಸಹಾಯ ಹಸ್ತದತ್ತ ಚಿತ್ತ ನೆಟ್ಟಿದ್ದು ಒಳಗೊಳಗೆ ಕಸರತ್ತು ಶುರುವಾಗಿದೆ. ಇನ್ನು ಮತ ಎಣಿಕೆಯ ದಿನ (ಮೇ 10) ವಿಶ್ರಾಂತಿಗಾಗಿ ಸಿಂಗಾಪುರಕ್ಕೆ ತೆರಳುವ ಮೊದಲು ಹೆಚ್ಡಿ ಕುಮಾರಸ್ವಾಮಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ಸಂದರ್ಶನ ನೀಡಿದ್ದು,
ಕ್ಸಿಟ್ ಪೋಲ್ಗಳ ಬಗ್ಗೆ ಮಾತನಾಡಿದ್ದಾರೆ. ಹಾಗೂ ಅವುಗಳಲ್ಲಿ ಹಲವು ಸಮೀಕ್ಷೆಗಳು ಜೆಡಿಎಸ್ ಪಾರ್ಟಿಗೆ ಬಹಳ ಕಡಿಮೆ ಸೀಟ್ಗಳು ಸಿಗುತ್ತವೆ ಎಂದು ತಿಳಿಸಿವೆ. ಆದ್ರೆ ನನಗೆ 50 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನನ್ನ ಷರತ್ತುಗಳನ್ನು ಈಡೇರಿಸಲು ಒಪ್ಪುವ ಪಕ್ಷದೊಂದಿಗೆ ಹೋಗುತ್ತೇನೆ ಎಂದು ಹೆಚ್ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಮೂಲಕ ಮೈತ್ರಿಗೆ ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ.