ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಇದೀಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಸರ್ಕಾರದ ವಿರುದ್ಧ ಕುಮಾರಸ್ವಾಮಿ ವರ್ಗಾವಣೆ ದಂಧೆಯ ಆರೋಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರು ಓರ್ವ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದಾರೆ. ಆದರೆ ಸಚಿವರೊಬ್ಬರು ಅಧಿಕಾರ ತೆಗೆದುಕೊಳ್ಳದಂತೆ ಹೇಳಿದ್ದಾರೆ. ಸಿಎಂ ಆದೇಶ ಮಾಡಿದರೂ ಅಧಿಕಾರ ತೆಗೆದುಕೊಳ್ಳಬೇಡಿ ಎಂದಿದ್ದಾರೆ. ಆ ಸಚಿವರು ಸದ್ಯ ವಿದೇಶದಲ್ಲಿ ಇದ್ದಾರೆ ಅಂತ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಹಾಗಾದ್ರೆ ಎಷ್ಟು ಹಣ ಕೊಟ್ಟು ಬಂದ್ರು ಈ ಅಧಿಕಾರಿ..?. ಈಗ ಜ್ಯೋತಿ ಕಾರ್ಯಕ್ರಮ ನಡೆಯುತ್ತಿದೆ. ಈ ದಂಧೆ ಬಗ್ಗೆ ಏನು ಹೇಳ್ತಾರೆ ಇವರು ಎಂದು ಹೆಚ್ಡಿಕೆ ಅವರು ಸರ್ಕಾರವನ್ನ ಖಾರವಾಗಿ ಪ್ರಶ್ನಿಸಿದ್ದಾರೆ.