ಬೆಂಗಳೂರು: ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯವಾದಿಗಳು, ಭಾರತ ಕಂಡ ಶ್ರೇಷ್ಠ ಕಾನೂನು ತಜ್ಞರಲ್ಲಿ ಪ್ರಮುಖರು, ಕಾವೇರಿ ಸೇರಿದಂತೆ ನಾಡಿನ ಅನೇಕ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕರ್ನಾಟಕದ ಜತೆ ಅಚಲವಾಗಿ ನಿಂತಿದ್ದ ಪದ್ಮಭೂಷಣ ಶ್ರೀ ಫಾಲಿ ನರೀಮನ್ ಅವರ ನಿಧನ ನನಗೆ ಅತೀವ ದುಃಖ ಉಂಟು ಮಾಡಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಂತಾ ಸೂಚಿಸಿದ್ದಾರೆ.
ನಂಬಿದ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ಜನ ಸಾಮಾನ್ಯರಿಗೂ ನ್ಯಾಯ ಧಕ್ಕುವಂತೆ ಮಾಡುವಲ್ಲಿ ಶ್ರೀ ನರೀಮನ್ ಅವರು ನಿರ್ಣಾಯಕ ಪಾತ್ರ ವಹಿಸಿದ್ದರು, ಅದಕ್ಕಾಗಿ ತಮ್ಮ ಬದುಕನ್ನು ಮುಡಿಪಾಗಿಟ್ಟಿದ್ದರು. ಅವರ ಅಗಲಿಕೆ ದೇಶಕ್ಕೆ, ಅದರಲ್ಲೂ ಕರ್ನಾಟಕಕ್ಕೆ ತುಂಬಲಾಗದ ನಷ್ಟ ಎನ್ನುವುದು ನನ್ನ ಭಾವನೆ.
ಆ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಭಿಮಾನಿಗಳು, ಕುಟುಂಬದ ಸದಸ್ಯರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.