ಬೆಂಗಳೂರು: ನಾರಾಯಣಗುರು ಶಕ್ತಿಪೀಠದ ಪ್ರಣವಾನಂದ ಶ್ರೀಗಳನ್ನು ಇಂದು ಮಾಜಿ ಸಿಎಂ ಹಾಗೂ ಜೆಡಿಎಸ್ ವರಿಷ್ಟ ಹೆಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಭೇಟಿ ಮಾಡಿದ್ದು, ಶೇಂದಿ ವೃತ್ತಿ ಪುನಾರಾಂಭಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ.
ಹಾಗೂ ಈಡಿಗ,ಬಿಲ್ಲವ ಸಮುದಾಯದ ಅಭಿವೃದ್ಧಿ ಗೆ ಸ್ವಾಮೀಜಿಗಳು ಮನವಿ ಮಾಡಿದ್ದು, ಮುಂದೆ ನಾವು ಅಧಿಕಾರಕ್ಕೆ ಬಂದರೇ ಖಂಡಿತ ನ್ಯಾಯ ಕೊಡಿಸುವುದಾಗಿ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಹಲವರು ಉಪಸ್ಥಿತರಿದ್ದರು.