ಕೇಂದ್ರ ಸರ್ಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸನ್ಮಾನ್ಯ HD ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ TA ಶರವಣ ಅವರು ಹೂಗುಚ್ಚ ನೀಡಿ ಶುಭಾಶಯ ತಿಳಿಸಿದರು.
ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕೇಂದ್ರ ಮಂತ್ರಿ ಆಗಿರುವುದು ಬಹಳ ಸಂತೋಷವಾಗಿದೆ.
ಕರ್ನಾಟಕ ಜನತೆ ತುಂಬಾ ಖುಷಿ ಪಡುತ್ತಾರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ HD ಕುಮಾರಸ್ವಾಮಿ ಅವರು ಉತ್ತಮ ಕೆಲಸ ಮಾಡುತ್ತಾರೆ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದು ಕರ್ನಾಟಕದ ಹೆಮ್ಮೆ ಎಂದು TA ಶರವಣ ತಿಳಿಸಿದರು
ಜೆಡಿಎಸ್ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಖುಷಿ ತಂದಿದೆ. ಜತೆಗೆ ಮತ್ತಷ್ಟು ಆತ್ಮವಿಶ್ವಾಸ ತುಂಬಿ ಉತ್ಸಾಹದಿಂದ ಕಾರ್ಯ ನಿರ್ವಹಿಸುವಂತೆ ಮಾಡಿದೆ ಎಂದು ಶರವಣ ತಿಳಿಸಿದರು.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭಾರೀ ಅಂತರದಿಂದ ಗೆದ್ದಿರುವ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಲೋಕಸಭೆ ಪ್ರವೇಶ ಮಾಡಿದ್ದಾರೆ. ಮೊದಲ ಬಾರಿಗೆ ಕೇಂದ್ರ ಸಚಿವರಾಗುತ್ತಿದ್ದಾರೆ.
ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಕನಕಪುರ ಲೋಕಸಭಾ ಕ್ಷೇತ್ರದಿಂದ ಸಂಸದರಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು.