ವಿಜಯಪುರ ;- ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದಂತೆ ಪೆನ್ ಡ್ರೈವ್ ಬಿಡುಗಡೆ ಮಾಡಿದರೆ ಸೂಕ್ತ ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ವಿಜಯಪುರದಲ್ಲಿ ಮಾತನಾಡಿದ ಅವರು, ಡ್ರೈವ್ನಲ್ಲಿರುವ ಧ್ವನಿ ಯಾರದು ಎಂಬುದನ್ನು ಪರಿಶೀಲಿಸಬೇಕು. ಯಾರು ಮಾತನಾಡಿದ್ದಾರೆ, ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಲ್ಲದರ ಬಗ್ಗೆಯೂ ತನಿಖೆಯಾಗಬೇಕಾಗುತ್ತದೆ. ಏಕೆಂದರೆ, ಈಗೆಲ್ಲ ಮಿಮಿಕ್ರಿ ಬೇರೆ ಮಾಡುತ್ತಾರೆ. ಕುಮಾರಸ್ವಾಮಿ ಅವರು ಪೆನ್ಡ್ರೈವ್ ಬಿಡುಗಡೆ ಮಾಡಿದಾಗ ಅದಕ್ಕೆ ಉತ್ತರ ಕೊಡುತ್ತೇವೆ ಎಂದರು.
ಇನ್ನೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವಾರು ಕಾಮಗಾರಿಯಲ್ಲಿ ನಿಗದಿತ ಮೊತ್ತಕ್ಕಿಂತ ಹೆಚ್ಚು ಮೊತ್ತ ಬಿಡುಗಡೆ ಮಾಡಿಸಿದ್ದಾರೆ ಎಂದು ಎಂಬಿ ಪಾಟೀಲ್ ಆರೋಪಿಸಿದ್ದಾರೆ. ಸಿಸಿ ಪಾಟೀಲರು ತಮ್ಮ ಬಜೆಟ್ಗಿಂತ ನಾಲ್ಕೈದು ಸಾವಿರ ಕೋಟಿ ಜಾಸ್ತಿ ಖರ್ಚು ಮಾಡಿದ್ದಾರೆ. ಸಿಸಿ ಪಾಟೀಲರು ಯಾಕೆ ಹೆಚ್ಚು ಖರ್ಚು ಮಾಡಿದರು, ಗೊತ್ತಲ್ಲ ಎಂದು ಟಾಂಗ್ ನೀಡಿದರು.