ಬೆಂಗಳೂರು: ನಕಲಿ ವೈದ್ಯರ ಕಡಿವಾಣಕ್ಕೆ ಆರೋಗ್ಯ ಇಲಾಖೆ ಮಾಸ್ಟರ್ ಪ್ಲಾನ್ ಮಾಡಿದ್ದು ಇನ್ಮೇಲೆ ಖಾಸಗಿ ಆಸ್ಪತ್ರೆ ವೈದ್ಯರು ಕೆಪಿಎಂಇ ಅಡಿ ನೋಂದಣಿಯನ್ನು ಕಡ್ಡಾಯ ಮಾಡಲಾಗಿದೆ.
ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ಹಾಗೂ ತಿದ್ದುಪಡಿ ಅಧಿನಿಯಮ 2016 ಸೆಕ್ಷನ್ 5ರ ಅನ್ವಯ ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಖಾಸಗಿ ವೈದ್ಯರುಗಳು ಕೆಪಿಎಂಇ ಕಾಯ್ದೆಯಡಿ ನೋಂದಣಿ ಕಡ್ಡಾಯ ಮಾಡಲಾಗಿದೆ.ನಕಲಿ ವೈದ್ಯರು ಕ್ಲಿನಿಕ್ ನಡೆಸುತ್ತಿರುವ ಹಿನ್ನಲೆ ಕಡ್ಡಾಯ ಸೂಚನೆ ಹೊರಡಿಸಿದ ಆರೋಗ್ಯ ಇಲಾಖೆ
ದಿನೇ ದಿನೆ ನಕಲಿ ಕ್ಲೀನಿಕ್ ಗಳು ಹೆಚ್ಚಾಗ್ತಿದ್ದು ಇದಕ್ಕೆ ಬ್ರೆಕ್ ಹಾಕಲು ಮುಂದಾದ ಆರೋಗ್ಯ ಇಲಾಖೆ ನಕಲಿ ವೈದ್ಯರು ಕ್ಲಿನಿಕ್ ಕಂಡುಬಂದಲ್ಲಿ ಮೂರು ವರ್ಷ ಜೈಲು ಹಾಗೂ 1 ಲಕ್ಷ ದಂಡ ವಿಧಿಸಲಾಗುವುದು. ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಆರೋಗ್ಯ ಇಲಾಖೆ