ಬೆಂಗಳೂರು:– ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 60ರ ವೃದ್ಧರೊಬ್ಬರು ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ
ಮೃತ ವ್ಯಕ್ತಿಯನ್ನು ಕೃಷ್ಣ (60) ಎಂದು ಗುರುತಿಸಲಾಗಿದೆ. ವ್ಯಕ್ತಿ ಬಸ್ನಲ್ಲಿ ಟಿಕೆಟ್ ಪಡೆದು ಕುಳಿತಿದ್ದ 15 ನಿಮಿಷಗಳಲ್ಲೇ ಹೃದಯಾಘಾತ ಸಂಭವಿಸಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನೆಯನ್ನು ಕಣ್ಣಾರೆ ಕಂಡ ಇತರೇ ಪ್ರಯಾಣಿಕರು ಬಸ್ಸಿನಲ್ಲೇ ಕಿರುಚಾಡಿದ್ದಾರೆ.
ಮೆಜೆಸ್ಟಿಕ್ನಲ್ಲಿ ಬಸ್ ಹತ್ತಿದ್ದ ಮೃತ ವ್ಯಕ್ತಿ, ರಾಜಾಜೀನಗರದ ನವರಂಗ್ ವೃತ್ತದ ಬಳಿ ಬರುತ್ತಿದ್ದ ವೇಳೆ ಸಾವು ಸಂಭವಿಸಿದೆ. ಕೂಡಲೇ ಆತನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಕೊಡಿಸುವಷ್ಟರಲ್ಲಿ ವ್ಯಕ್ತಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ.