ಬೆಂಗಳೂರು;- ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದಿನಿಂದ ಆಗಸ್ಟ್ 3ರವರೆಗೆ 6ರಿಂದ 11 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡಿನ ಪ್ರದೇಶಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಆಗಸ್ಟ್ 3ಕ್ಕೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಇನ್ನುಳಿದಂತೆ ದಕ್ಷಿಣ ಒಳನಾಡಿನ ಭಾಗದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಹಗರು ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಇದೇ ವಾತಾವರಣ ಮುಂದುವರಿಯಲಿದೆ.
ಪಶ್ಚಿಮ ಘಟ್ಟಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ನದಿಗಳಿಗೆ ಜೀವ ಕಳೆ ಬಂದಿದೆ. ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.
![Demo](https://prajatvkannada.com/wp-content/uploads/2023/08/new-Aston-Band.jpeg)