ಬೆಂಗಳೂರು:– ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಎರಡು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯುವ ನಿರೀಕ್ಷೆಯಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಒಂದೆರಡು ಭಾಗದಲ್ಲಿ ಮಾತ್ರ ಮಳೆ ಸುರಿಯಬಹುದು. ಆದರೆ ಉತ್ತರ ಕರ್ನಾಟಕದಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ತಿಳಿಸಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನವೂ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಕೆಲವೆಡೆ ಸಾಧಾರಣ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿದೆ.
ಮತ್ತೊಂದೆಡೆ ನೋಡುವುದಾದರೆ ಗರಿಷ್ಠ ಉಷ್ಣಾಂಶದಲ್ಲಿ ಕೊಂಚ ಕುಸಿತ ಕಾಣಲಿದೆ. ಗರಿಷ್ಠ ಉಷ್ಣಾಂಶವು ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ 26 ಡಿಗ್ರಿ ಸೆಲ್ಸಿಯಸ್ನಷ್ಟು ಇದ್ದರೆ, ಕನಿಷ್ಠ ಉಷ್ಣಾಂಶದ ಪ್ರಮಾಣ 19 ಡಿಗ್ರಿ ಸೆಲ್ಸಿಯಸ್ನಷ್ಟು ದಾಖಲು ಆಗಬಹುದು. ಬುಧವಾರ ಗರಿಷ್ಠ ಉಷ್ಣಾಂಶದಲ್ಲಿ ಮಾತ್ರ ಸ್ವಲ್ಪ ಏರಿಕೆ ಆಗಲಿದೆ. ಅಂದರೆ 27 ಡಿಗ್ರಿ ಸೆಲ್ಸಿಯಸ್ನಷ್ಟು ಆಗಬಹುದು. ಕನಿಷ್ಠ ಉಷ್ಣಾಂಶದಲ್ಲಿ ಹೆಚ್ಚಿನ ವ್ಯತ್ಯಾಸ ಏನೂ ಇಲ್ಲ. ಮೋಡ ಕವಿದ ವಾತಾವರಣ ಬುಧವಾರದವರೆಗೂ ಮುಂದುವರಿಯಲಿದೆ ಎಂದು ತಿಳಿಸಿದೆ.