ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಭಾನುವಾರ ಹಲವೆಡೆ ಮಳೆಯಾಗಿದೆ. ಎಚ್ಎಎಲ್ನಲ್ಲಿ 28.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.