ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗಲಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಅಷ್ಟೇ ಅಲ್ಲದೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ತುಮಕೂರು, ರಾಮನಗರ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.ಡ್ಬೋದು
ಈಗಾಗಲೇ ಮೋಕಾ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಕರಾವಳಿ ಭಾಗಗಳಲ್ಲಿ ಇಂದು ಮುಂಜಾನೆಯಿಂದಲೇ ಮಳೆ ಆರಂಭವಾಗಿದೆ. ಅಲ್ಲದೆ ಹವಾಮಾನ ಇಲಾಖೆ ಕರಾವಳಿ ಭಾಗದ ಮೀನುಗಾರರಿಗೆ ಕೆಲವು ಎಚ್ಚರಿಕೆ ಸಂದೇಶವನ್ನು ನೀಡಿದೆ.