ಬೆಂಗಳೂರು:- ಅ. 8 ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಇಂದು ಶುಭ್ರ ಆಕಾಶವಿದೆ, ಎಚ್ಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ