ಬೆಂಗಳೂರು:- ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 6ರವರೆಗೂ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಸಯ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.