ಕರ್ನಾಟಕದಲ್ಲಿ ಇನ್ನೂ 4 ದಿನ ಭರ್ಜರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಇಬ್ಬರು ಪವಾಡ ಸದೃಶ ರೀತಿಯಲ್ಲಿ ಬಚಾವ್ ಆಗಿದ್ದಾರೆ.
ಘಟ್ಟಪ್ರದೇಶದಲ್ಲಿನ ಮಳೆಗೆ ಕುಮಾಧಾರಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಕುಕ್ಕೆ ಸುಬ್ರಹ್ಮಣ್ಯ ಬಳಿ ಸ್ನಾನಘಟ್ಟ, ಕಿಂಡಿ ಆಣೆಕಟ್ಟು ಸಂಪೂರ್ಣ ಮುಳುಗಡೆ ಆಗಿದೆ. ನೇತ್ರಾವತಿ ನದಿ ಕೂಡಾ ಮೈದುಂಬಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರೀತಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಪವಿತ್ರ ಸ್ನಾನಘಟ್ಟ ಮುಳುಗಿ, ಮುಖ್ಯ ದ್ವಾರದವೆರಗೂ ನೀರು ತಲುಪಿದೆ. ಭಕ್ತರು ಪುಣ್ಯ ಸ್ನಾನ ಮಾಡಲಾಗದೆ ಪರದಾಡ್ತಿದ್ದಾರೆ. ಪಿಂಡ ಪ್ರಧಾನಕ್ಕೂ ತೊಂದರೆ ಉಂಟಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಬಳಿ ಭದ್ರಾನದಿ ಮೈತುಂಬಿದೆ.
ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಗೆ 4-5 ಅಡಿಯಷ್ಟೇ ಬಾಕಿ ಇದೆ.
ಅರಬ್ಬಿ ಸಮುದ್ರದಲ್ಲಿ ರಕ್ಕಸಗಾತ್ರದ ಅಲೆಗಳು ಅಪ್ಪಳಿಸುತ್ತಿದ್ದು, ಕ್ಷಣಕ್ಷಣಕ್ಕೂ ಕಡಲಕೊರತೆ ಹೆಚ್ಚಾಗುತ್ತಿದೆ. ಮೀನುಗಾರರೇ ತಡೆಗೋಡೆ ಹಾಕುತ್ತಿದ್ದಾರೆ. ಇನ್ನು ಕಾರವಾರದ ದೇವಬಾಗ್ ಕಡಲತೀರದಲ್ಲಿ ಕಡಲಕೊರೆತ ಹೆಚ್ಚಾಗಿದ್ದು, ರೆಸಾರ್ಟ್ನ ನಾಲ್ಕು ಕಾಟೇಜ್ಗಳಿಗೆ ಹಾನಿಯಾಗಿದೆ.