ಬೆಂಗಳೂರು:- ಇಂದಿನಿಂದ ಅ.17 ರವರೆಗೆ, ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೊತೆಗೆ ಇವತ್ತಿನಿಂದ ಅಕ್ಟೋಬರ್ 17ರ ವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್ ಹೇಳಿದ್ದಾರೆ.
ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅ. 15ರ ವರೆಗೆ ಹಲವು ಕಡೆ ಮಳೆ ಸಾಧ್ಯತೆಯಿದೆ. ಅ.16ರಂದು ಕರಾವಳಿಯಲ್ಲಿ 16 ರಿಂದ 18ರ ವರೆಗೆ ವ್ಯಾಪಕ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಬಹುದು.