ಕರ್ನಾಟಕದ ಹಲವೆಡೆ ನಾಳೆಯಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನುಳಿದಂತೆ ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.