ಬೆಂಗಳೂರಿನಲ್ಲಿ ಮಧ್ಯಾಹ್ನವೇ ಬಿರುಗಾಳಿ ಸಹಿತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಗುಡುಗು ಸಿಡಿಲು ಸಮೇತ ಅಬ್ಬರಿಸುತ್ತಿರುವ ಮಳೆರಾಯ ರಸ್ತೆಯೇ ಕಾಣದ ಸ್ಥಿತಿಯಲ್ಲಿ ಸುರಿಯುತ್ತಿರುವ ವರುಣ. ಮಳೆ ನಿಲ್ಲುವವರೆಗೂ ವಾಹನ ಸವಾರರು ಪ್ರಯಾಣ ಮಾಡದಿರುವುದು ಒಳ್ಳೆಯದು ಮಳೆಯ ವೇಳೆ ಸುರಕ್ಷಿತ ಪ್ರದೇಶದಲ್ಲಿ ಇದ್ದರೆ ಸೇಫ್ ಎಂದು ಜನ ಭಾವಿಸಿದ್ದಾರೆ.
ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗಲಿದೆ.