ಕೋಲ್ಕತ್ತಾ: ಮಳೆಯ ಅವಾಂತರ ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ವಿವಿಧ ರಾಜ್ಯಗಳಲ್ಲೂ ಮುಂದುವರಿದಿದೆ. ಕೋಲ್ಕತ್ತಾದಲ್ಲಿ ಭಾರೀ ಮಳೆಗೆ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪೂರ್ಣ ಜಲಾವೃತಗೊಂಡಿದೆ.
ಪಶ್ಚಿಮ ಬಂಗಾಳದ ರಾಜಧಾನಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದ್ದರಿಂದ ವಿಮಾನ ನಿಲ್ದಾಣದಲ್ಲೂ ನೀರು ತುಂಬಿಕೊಂಡಿದೆ. ವಿಮಾನ ನಿಲ್ದಾಣದ ರನ್ವೇ ಹಾಗೂ ಟ್ಯಾಕ್ಸಿವೇಗಳಲ್ಲಿ ಮೊಣಕಾಲುದ್ದ ನೀರು ತುಂಬಿಕೊಂಡಿರುವ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿವೆ. ಅಲ್ಲದೇ ಹೌರಾ, ಸಾಲ್ಟ್ ಲೇಕ್ ಮತ್ತು ಬ್ಯಾರಕ್ಪುರ ಸೇರಿದಂತೆ ಕೋಲ್ಕತ್ತಾ ಮತ್ತು ಅದರ ನೆರೆಯ ಪ್ರದೇಶಗಳು ನಿರಂತರ ಮಳೆಯಿಂದ ಮುಳುಗಿ ಹೋಗಿದೆ.