ಬೆಂಗಳೂರು;– ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಅಂಡರ್ ಪಾಸ್ ಬಂದ್ ಮಾಡಲಾಗಿದೆ. ಹೀಗಾಗಿ ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಕಾರ್ಪೋರೇಷನ್, ಮಜೆಸ್ಟಿಕ್, ಹೆಬ್ಬಾಳ, ಶಾಂತಿನಗರ, ವಿಲ್ಸನ್ಗಾರ್ಡನ್ ಸೇರಿದಂತೆ ಹಲವಡೆ ಧಾರಾಕಾರ ಮಳೆ ಹಿನ್ನೆಲೆ ಭಾರಿ ಟ್ರಾಫಿಕ್ ಜಾಮ್ ಆಗಿದೆ. ನೂರಾರು ವಾಹನಗಳು ಜಾಮ್ನಲ್ಲಿ ಸಿಲುಕಿದ್ದು, ಗಂಟೆಗಟ್ಟಲೆ ವಾಹನಗಳು ಟ್ರಾಫಿಕ್ನಲ್ಲಿ ನಿಂತಿದ್ದವು.
ಮೆಜೆಸ್ಟಿಕ್, ಶಾಂತಿನಗರ, ಕಾರ್ಪೊರೇಷನ್ ಸರ್ಕಲ್, ಶಿವಾಜಿನಗರ, ಮೈಸೂರು ರಸ್ತೆ, ಕೆ.ಆರ್.ಮಾರುಕಟ್ಟೆ, ಮಾಗಡಿ ರಸ್ತೆ, ವಿಜಯನಗರ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಿದೆ. ಔಟರ್ ರಿಂಗ್ ರೋಡ್ ಬಿಇಎಲ್ ವೃತ್ತದಿಂದ ಕುವೆಂಪು ವೃತ್ತದಿಂದ ಹೆಬ್ಬಾಳ ಫ್ಲೈಓವರ್ವರೆಗೆ ರಸ್ತೆ ಜಲಾವೃತವಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ. ಅನಿಲ್ ಕುಂಬ್ಳೆ ವೃತ್ತ ಮತ್ತು ರಾಣಿ ಪ್ರತಿಮೆ ಬಳಿಯೂ ಜಲಾವೃತವಾಗಿದೆ.
ಮಳೆರಾಯನ ಆರ್ಭಟ ಜೋರದ ಹಿನ್ನೆಲೆ ಬೆಂಗಳೂರಿಗರು ರಸ್ತೆಗಳಲ್ಲಿ ಸುರಕ್ಷಿತವಾಗಿ ಮತ್ತು ನಿಧಾನವಾಗಿ ಸಂಚರಿಸಬೇಕು ಎಂದು ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ. ವೈಟ್ಫೀಲ್ಡ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಧಾನಗತಿಯ ಸಂಚಾರ ದಟ್ಟಣೆ ಕಂಡುಬಂದಿದೆ.