ವಾಯವ್ಯ ಪಾಕಿಸ್ತಾನದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಪ್ರವಾಹ ಸಂಬವಿಸದೆ. ಪರಿಣಾಮ ಕೆಲವು ಕಡೆ ಮನೆಗಳ ಚಾವಣಿಗಳು ಕುಸಿದಿವೆ. ಕಳೆದ 24 ಗಂಟೆಗಳಲ್ಲಿ ಮಳೆಯಿಂದ ಉಂಟಾದ ಅವಾಂತರಗಳಲ್ಲಿ ಒಟ್ಟು 11 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಫ್ಗಾನಿಸ್ತಾನದ ಗಡಿಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಟ್ಯಾಂಕ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಮನೆಯ ಚಾವಣಿ ಕುಸಿದು ಏಳು ಜನರು ಮತ್ತು ಕರಕ್ ಜಿಲ್ಲೆಯಲ್ಲಿ ನಾಲ್ವರು ಪ್ರವಾಹದಲ್ಲಿ ಮುಳುಗಿ ಸತ್ತಿದ್ದಾರೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಮಳೆಯಿಂದ ಹಾನಿಗೀಡಾದ ಪ್ರದೇಶಗಳ ಜನರಿಗೆ ಸಾಧ್ಯವಾದಷ್ಟು ನೆರವು ಮತ್ತು ಪರಿಹಾರ ನೀಡುವಂತೆ ಆಯಾ ಜಿಲ್ಲಾಡಳಿತಗಳಿಗೆ ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಅಲಿ ಅಮೀನ್ ಗಂಡಪುರ್ ಸೂಚನೆ ನೀಡಿದ್ದಾರೆ.