ಬೆಂಗಳೂರು;- ಕರ್ನಾಟಕದಲ್ಲಿ ಇನ್ನೂ 5 ದಿನ ಭಾರೀ ಮಳೆ ಆಗಲಿದ್ದು, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಡುಗು, ಮಿಂಚು ಸಹಿತ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಹೀಗಾಗಿ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಡಾ.ಸಿ.ಎಸ್ ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ಕರಾವಳಿಯ ಜಿಲ್ಲೆಗಳು, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಳೆ/ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ಶನಿವಾರವೂ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಈ ಆರು ಜಿಲ್ಲೆಗಳನ್ನು ಹೊರತುಪಡಿಸಿದರೆ, ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.