ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹತ್ತಿರ ಜಾಕ್ವೆಲ್ ಬಳಿ ವಿದ್ಯುತ್ ಸ್ಪರ್ಶಿಸಿ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುರೇಶ ಹನಮಂತಪ್ಪ ಇಂಚಲ (46) ಮೃತ ದುರ್ದೈವಿಯಾಗಿದ್ದಾರೆ. ದುರಸ್ತಿಗಾಗಿ ಕಂಬ ಏರಿದ್ದಾಗ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಹೆಸ್ಕಾಂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು, ಗ್ರಾಮದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಆಗಮಿಸುವಂತೆ ಮೃತರ ಕುಟುಂಬಸ್ಥರು ಪಟ್ಟುಹಿಡಿದರು. ಇಲ್ಲದೇ ಇದ್ದರೆ ಶವ ತೆಗೆಯುವುದಿಲ್ಲ ಎಂದು ಪ್ರತಿಭಟಿಸಿದರು.ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.