ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಆತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಆರು ತಿಂಗಳ ಹಿಂದೆ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅಂದಿನಿಂದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇದೀಗ ಅತ್ಯಾಚಾರ ಕೇಸಿನಲ್ಲಿ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಜನವರಿ 13 ರಂದು ನಿಗದಿಯಾಗಿದ್ದ ಆರೋಪ ನಿಗದಿ ಪ್ರಕ್ರಿಯೆಗೆ ತಾತ್ಕಾಲಿಕವಾಗಿ ತಡೆ ಬಿದ್ದಿದೆ.
ಜ.13ರಿಂದ ಆರಂಭವಾಗಬೇಕಿದ್ದ ಆರೋಪ ನಿಗದಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದು, ಆರೋಪಿ ಪ್ರಜ್ವಲ್ ಕೋರ್ಟ್ಗೆ ಬಂದು ಟ್ರಯಲ್ ಎದುರಿಸುವುದರಿಂದ ತಾತ್ಕಾಲಿಕ ತಡೆ ಸಿಕ್ಕಂತಾಗಿದೆ.
ಇನ್ನು ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಜ.16ಕ್ಕೆ ಮುಂದೂಡಿಕೆ ಮಾಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದಿಂದ ಆದೇಶ ಹೊರಡಿಸಲಾಗಿದೆ.