ಬೆಂಗಳೂರು: ಅಕ್ರಮವಾಗಿ ಗನ್ ಗಳನ್ನು ಸಿದ್ಧಪಡಿಸಿ ಮಾರಾಟ ಮಾಡುತ್ತಿದ್ದ ಪ್ರಕರಣದ ಸಂಬಂಧ ಆರೋಪಿಗೆ ಬೆಂಗಳೂರಿನ ಹೈಕೋರ್ಟ್ ಜಾಮೀನು ನೀಡಿದೆ. ಕೃಷ್ಣಪ್ಪ ಎಂಬುವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಆರೋಪಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಅಲ್ಲದೆ, ವೃತ್ತಿಯಲ್ಲಿ ಕಾಪೆರ್ಂಟರ್ ಆಗಿರುವ ಅರ್ಜಿದಾರನ ವಿರುದ್ಧ ಸಿಂಗಲ್ ಬ್ಯಾರೆಲ್ ಗನ್ಗಳನ್ನು ತಯಾರಿಸಿ,
ಪರವಾನಗಿ ಹೊಂದಿರದ ವ್ಯಕ್ತಿಗಳಿಗೆ ಮಾರಾಟ ಮಾಡಿದ ಆರೋಪವಿದೆ. ಆತನಿಂದ ಕೆಲವು ಗನ್ಗಳು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕೃಷ್ಣಪ್ಪ ಕಳೆದ 1 ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದಾನೆ. ಪ್ರಕರಣದ ತನಿಖೆ ಈಗಾಗಲೇ ಪೂರ್ಣಗೊಂಡಿದ್ದು ವಿಚಾರಣಾ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನೂ ಸಲ್ಲಿಸಲಾಗಿದೆ. ವಿಚಾರಣಾ ನ್ಯಾಯಾಲಯದ ವಿಚಾರಣೆಗಾಗಿ ಅರ್ಜಿದಾರನನ್ನು ಬಂಧಿಸಿಟ್ಟುಕೊಳ್ಳುವ ಅವಶ್ಯಕತೆ ಕಂಡುಬರುತ್ತಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.