ಹೊಸದಿಲ್ಲಿ :- ರಾಹುಲ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಅಮಿತ್ ಶಾ ಮತ್ತು ಉದ್ಯಮಿ ಗೌತಮ್ ಅದಾನಿ ಅವರನ್ನು “ಪಿಕ್ಪಾಕೆಟರ್’ ಎಂದು ಕರೆದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕಾನೂನುರೀತಿ ಕ್ರಮ ಕೈಗೊಳ್ಳಿ ಎಂದು ಚುನಾವಣ ಆಯೋಗಕ್ಕೆ ದಿಲ್ಲಿ ಹೈಕೋರ್ಟ್ ನಿರ್ದೇಶನ ನೀಡಿದೆ.
ಹೇಳಿಕೆ ಉತ್ತಮ ಅಭಿರುಚಿ ಹೊಂದಿಲ್ಲ. ಆದರೂ ಈ ಪ್ರಕರಣವನ್ನು ಆಯೋಗ ಇತ್ಯರ್ಥಪಡಿಸದೇ ಬಾಕಿ ಉಳಿಸಿಕೊಂಡಿದೆ. 8 ವಾರ ಗಳ ಒಳ ಗಾಗಿ ಈ ಕುರಿತು ಕ್ರಮ ಕೈಗೊಳ್ಳಿ’ ಎಂದು ಆಯೋಗಕ್ಕೆ ಹೈಕೋರ್ಟ್ ಸೂಚಿಸಿದೆ. ಇದಕ್ಕೂ ಮುನ್ನ ಆಯೋಗ, ಈ ಸಂಬಂಧ ನ.23ರಂದು ರಾಹುಲ್ಗೆ ನೋಟಿಸ್ ನೀಡಿದ್ದರೂ, ನಿಗದಿತ ಅವಧಿ(ನ.26) ಮುಗಿದರೂ ಅವ ರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮಾಹಿತಿ ನೀಡಿತು.