ಬೆಂಗಳೂರು: ಪಿಎಸ್ಐ ಹಗರಣದಲ್ಲಿ ಎಷ್ಟು ಮಂದಿ ಭಾಗಿಯಾಗಿದ್ದಾರೆ ಎಂಬ ವರದಿಯನ್ನು ಜೂನ್ 15ರ ಒಳಗೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಬೆಂಗಳೂರಿನ ಹೈಕೋರ್ಟ್ ಸೂಚನೆ ನೀಡಿದೆ. ಚಂದನ್ ಎಂಬುವರು ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದ್ರ ಮತ್ತು ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ್ ಅವರಿದ್ದ ವಿಭಾಗೀಯ ಪೀಠ.
ಪಿಎಸ್ಐ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳ ಪಟ್ಟಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.
ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ರಾಜ್ಯದಲ್ಲಿ ಸರ್ಕಾರದ ಕ್ರಮಕ್ಕೆ ತಡೆ ನೀಡಬೇಕು ನಡೆಯುತ್ತಿದ್ದು, ಈವರೆಗೂ 110 ಜನರನ್ನು ಬಂಧಿಸಲಾಗಿದೆ. ಇನ್ನೂ ಪ್ರಕರಣದ ತನಿಖೆ ಪ್ರಗತಿಯ ಹಂತದಲ್ಲಿದೆ. ಪರೀಕ್ಷೆಯಲ್ಲಿ ವಿದ್ಯುನ್ಮಾನ ಉಪಕರಣಗಳಾದ ಬ್ಲೂಟೂಟ್ ಬಳಸಿ ನಕಲು ಮಾಡಲಾಗಿದೆ.
ಇದೊಂದು ದೊಡ್ಡ ಹಗರಣವಾಗಿದೆ ಎಂದು ಪೀಠಕ್ಕೆ ಅಡ್ವೊಕೇಟ್ ಜನರಲ್ ವಿವರಣೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ, ನರೇಂದ್ರ ನೇತೃತ್ವದ ನ್ಯಾಯಪೀಠ, ದೊಡ್ಡ ಹಗರಣ ಎಂಬುದಾಗಿ ಹೇಳುತ್ತೀರಿ.
ಆದರೆ, ಕಳೆದ ಒಂದು ವರ್ಷದಿಂದ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ನಾವಡಗಿ ಅವರನ್ನು ಪ್ರಶ್ನಿಸಿತು. ಅಲ್ಲದೆ, ಕೆಲವರು ಮಾಡಿದ ತಪ್ಪಿನಿಂದಾಗಿ ಇತರಿಗೆ ಶಿಕ್ಷೆ ನೀಡುವುದು ಎಷ್ಟು ಸರಿ ಎಂದೂ ಮರು ಪ್ರಶ್ನಿಸಿತು. ತನಿಖಾಧಿಕಾರಿಗಳಿಗೆ ಜೂನ್ 15 ವರೆಗೂ ಕಾಲಾವಕಾಶ ನೀಡೋಣ. ಅಷ್ಟರಲ್ಲಿ ತನಿಖೆ ಪೂರ್ಣಗೊಳಿಸದಿದ್ದಲ್ಲಿ ಮುಂದಿನ ಆದೇಶ ನೀಡಲಾಗುವುದು ಎಂದು ಹೇಳಿದೆ.