ಬೆಂಗಳೂರು: ವಿಕೃತ ಕಾಮಿ ಅತ್ಯಾಚಾರ ಆರೋಪಿ ಉಮೇಶ್ ರೆಡ್ಡಿಗೆ ಪೆರೋಲ್ ನೀಡಲು ಹೈಕೋರ್ಟ್ ನಿರಾಕರಿಸಿದೆ. ಅನಾರೋಗ್ಯಕ್ಕೆ ತುತ್ತಾಗಿರುವ ತಾಯಿಯೊಂದಿಗೆ ಇರಲು 30 ದಿನಗಳ ಕಾಲ ಪೆರೋಲ್ ನೀಡುವಂತೆ ಕೋರಿ ಉಮೇಶ್ ರೆಡ್ಡಿ ಅರ್ಜಿ ಸಲ್ಲಿಸಿದ್ದರು.
ಆದರೆ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪೆರೋಲ್ ನೀಡಲು ನಿರಾಕರಿಸಿದ್ದಾರೆ.
ಮನೆ ದುರಸ್ತಿಯಲ್ಲಿದ್ದು ಅದನ್ನು ಸರಿಪಡಿಸುವುದಕ್ಕಾಗಿ ಪೆರೋಲ್ ನೀಡಬೇಕು ಎಂದು ಅರ್ಜಿದಾರರ ಮತ್ತೊಂದು ಮನವಿಯನ್ನು ತಿರಸ್ಕರಿಸಿದ ನ್ಯಾಯಪೀಠ, ಅರ್ಜಿದಾರರಿಗೆ ಇಬ್ಬರು ಸಹೋದರರಿದ್ದು, ತಾಯಿಯನ್ನು ನೋಡಿಕೊಳ್ಳುತ್ತಾರೆ. ಮನೆ ದುರಸ್ತಿಯನ್ನೂ ಮಾಡುತ್ತಾರೆ. ಅರ್ಜಿದಾರರ ನೀಡಿರುವ ಎರಡೂ ಕಾರಣಗಳಲ್ಲಿ ಸಮರ್ಥವಾಗಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.