ಬೆಂಗಳೂರು ;- ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಬೆಂಗಳೂರಿನ ಹೈಕೋರ್ಟ್ ನಲ್ಲಿ ನಡೆಯಲಿದೆ.
ಶಿವಮೂರ್ತಿ ಶ್ರೀಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ನವಾಜ್ ಅವರ ಏಕ ಸದಸ್ಯ ಪೀಠ ಕೈಗೆತ್ತಿಕೊಳ್ಳುತ್ತಿದ್ದು, ಸಂದೀಪ್ ಎಸ್ ಪಾಟೀಲ್ ವಕಾಲತ್ತು ನಡೆಸಲಿದ್ದಾರೆ.
ಶ್ರೀ ಮಠದಿಂದ ನಡೆಸುತ್ತಿರುವ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ 2022ರ ಸೆಪ್ಟೆಂಬರ್ 1 ರಿಂದ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಶರಣರು ಜಾಮೀನು ನೀಡುವಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.