ಹಿರೇಹರಕುಣಿ ದಲಿತರಿಗೆ ಸ್ಮಶಾನ ಭೂಮಿ ನೀಡಲು ಅಗ್ರಹಿಸಿ ಧಾರವಾಡದಲ್ಲಿ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ದಲಿತ ನಿವಾಸಿಗಳು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಕಳೆದ ಹಲವು ದಶಕಳಿಂದ ಹಿಂದೂ ಸಮುದಾಯದ ಎಲ್ಲರೂ ಒಂದೇ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಕಾರ್ಯ ಮಾಡಿಕೊಂಡು ಬರಲಾಗುತಿತ್ತು.
ಆದರೆ ಇತ್ತೀಚೆಗೆ ಈ ಹಿಂದೆ ಅಂತ್ಯಕ್ರಿಯೆ ನಡೆಸಲಾಗುತ್ತಿದ್ದ ಜಾಗ, ನಮ್ಮದು ಎಂದು ಬೇರೆ ಹಿಂದೂ ಸಮುದಾಯದ ಮುಖಂಡರು ದಲಿತರಿ ಅಂತ್ಯಕ್ರಿಯೆ ಕಾರ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ. ಇದರಿಂದಾಗಿ ದಲಿತರಿಗೆ ಹಿರೇಹರಕುಣಿ ಗ್ರಾಮದಲ್ಲಿ ಸ್ಮಶಾನ ಭೂಮಿ ಇಲ್ಲದಲಾಗಿದೆ. ಹಾಗಾಗಿ ಈ ಕೂಡಲೇ ರಾಜ್ಯ ರಾಜ್ಯದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ನಮ್ಮಗೆ ರುದ್ರಭೂಮಿ ನೀಡಬೇಕು ಎಂದು ಅಗ್ರಹಿಸಿ. ಒಂದು ವೇಳೆ ಇದರಲ್ಲಿ ನಿರ್ಲಕ್ಷ್ಯ ತೋರಿದ್ದಲ್ಲಿ ನಾವು ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಸರ್ಕಾರಕ್ಕೆ ಇದೇವೇಳೆ ಎಚ್ಚರಿಕೆ ನೀಡಿದರು.