ಲಕ್ನೋ: ರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಹೊತ್ತಲ್ಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಜನವರಿ 22ರಂದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.
ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವುದರ ಜೊತೆಗೆ, ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ದಿನದಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜನವರಿ 22ರಂದು ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲು ಮತ್ತು ಪಟಾಕಿಗಳ ವ್ಯವಸ್ಥೆಯನ್ನು ಮಾಡಲು ಆದಿತ್ಯನಾಥ್ ಕರೆ ನೀಡಿದ್ದಾರೆ.
ಮಾತ್ರವಲ್ಲದೇ ಯೋಗಿ ಅಯೋಧ್ಯೆಯಲ್ಲಿ ಸ್ವಚ್ಛತೆಯ ‘ಕುಂಭ ಮಾದರಿ’ ಅನುಷ್ಠಾನಕ್ಕೆ ನಿರ್ದೇಶನ ನೀಡಿದ್ದಾರೆ. ಜನವರಿ 14ರಂದು ಅಯೋಧ್ಯೆಯಲ್ಲಿ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಪೂರ್ಣಕುಂಬಾಭಿಷೇಕದ ಸಮಯದಲ್ಲಿ ಸ್ವಚ್ಛ ಮತ್ತು ನೈರ್ಮಲ್ಯ ನಗರವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಎಲ್ಲರಿಗೂ ಒತ್ತಿ ಹೇಳಿದರು..