ಶಿವಮೊಗ್ಗ;– ಭಾರೀ ಮಳೆಯ ಕಾರಣದಿಂದ ಶಿವಮೊಗ್ಗ ಎಲ್ಲ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಈ ಸಂಬಂಧ ಅಲ್ಲಿನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಾಲ್ಕು ದಿನಗಳಿಂದ ಮಳೆ ಅಬ್ಬರಿಸುತ್ತಿದ್ದು ಶನಿವಾರ ರಾತ್ರಿಯಿಂದ ಮಳೆ ಬಿರುಸುಗೊಂಡಿದೆ. ಭಾನುವಾರ ಇಡೀ ದಿನ ಮಳೆ ಸುರಿದಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.