ಜಮ್ಮು ಕಾಶ್ಮೀರ: ಅಮರನಾಥ ಯಾತ್ರೆಯಲ್ಲಿ(Amarnath Yatra) ಯಾತ್ರಾರ್ಥಿಗಳ ಸಾವು ಮುಂದುವರೆದಿದೆ. ಕಳೆದ 36 ಗಂಟೆಗಳಲ್ಲಿ ಐವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಈ ವರ್ಷದ ಯಾತ್ರೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಅಧಿಕಾರಿಗಳುತಿಳಿಸಿದ್ದಾರೆ.
ಬೆಳಿಗ್ಗೆಯಿಂದ ಸಾವನ್ನಪ್ಪಿದ ಐವರ ಪೈಕಿ ಒಬ್ಬ ಸಾಧು ಸೇರಿದ್ದಾರೆ. ಹೆಚ್ಚಿನ ಯಾತ್ರಿಕರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಯಾತ್ರೆಯ ಪಹಲ್ಗಾಮ್ ಅಕ್ಷದಲ್ಲಿ ನಾಲ್ಕು ಜನರು ಸಾವನ್ನಪ್ಪಿದರೆ, ಬಾಲ್ಟಾಲ್ ಮಾರ್ಗದಲ್ಲಿ ಒಬ್ಬರು ( Baltal is one of the route) ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಯಾತ್ರಿಕರು ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ ಮತ್ತು ಗುಜರಾತ್ಗೆ ಸೇರಿದವರಾಗಿದ್ದಾರೆ. ಒಬ್ಬರ ಗುರುತು ಪತ್ತೆಯಾಗಿಲ್ಲ.
ಬಲಿಯಾದವರಲ್ಲಿ ಯಾತ್ರಾ ಕರ್ತವ್ಯದಲ್ಲಿ ನಿಯೋಜಿಸಲಾದ ಇಂಡೋ–ಟಿಬೆಟಿಯನ್ ಬಾರ್ಡರ್ ಪೊಲೀಸ್ ಅಧಿಕಾರಿ, ಒಬ್ಬ ಸಾಧು ಮತ್ತು ಸೇವಾದಾರ್ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎತ್ತರದ ಪ್ರದೇಶಗಳಲ್ಲಿ ಆಮ್ಲಜನಕ ಪ್ರಮಾಣ ಕಡಿಮೆಯಿದೆ. ಇದರಿಂದಾಗಿ ಹೃದಯ ಸ್ತಂಭನ ಉಂಟಾಗುತ್ತಿದ್ದು, ಅಮರನಾಥ ಯಾತ್ರಿಕರು ಮತ್ತು ಅಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳ ಸಾವಿನ ಸಾಮಾನ್ಯ ಕಾರಣಗಳಲ್ಲಿ ಒಂದಾಗಿದೆ ಎನ್ನಲಾಗಿದೆ.