ಮೈಸೂರು: ಜಿಲ್ಲೆಯ ಕುರುಬೂರು (Kuruburu Accident) ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಉಳಿದಂತೆ ಇಬ್ಬರು ಮಕ್ಕಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಗಾಯಾಳು ಶಶಿಕುಮಾರ್ ಹಾಗೂ ಜನಾರ್ಧನ್ಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಶಶಿಕುಮಾರ್ ಸ್ಥಿತಿ ಗಂಭೀರವಾಗಿದೆ. ಇನ್ನು ಕಾರಿನಲ್ಲಿದ್ದ ಮಗು ಪುನೀತ್ ಹಾಗೂ ಬಸ್ನಲ್ಲಿದ್ದ ಮಗುವಿಗೆ ಕೂಡ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಮಕ್ಕಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದ 10 ಮಂದಿಯ ಮೃತದೇಹಗಳನ್ನು ಆಸ್ಪತ್ರೆ ಸಿಬ್ಬಂದಿ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಬಳ್ಳಾರಿಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಅಂಬುಲೆನ್ಸ್ ಮೂಲಕ ರವಾನಿಸಲಾಗಿದೆ. ಮಂಜುನಾಥ್ (35), ಪೂರ್ಣಿಮಾ (30), ಪವನ್ (10), ಕಾರ್ತಿಕ್ (8), ಸಂದೀಪ್ (24), ಸುಜಾತ (40), ಕೊಟ್ರೇಶ್ (45), ಗಾಯಿತ್ರಿ (35), ಶ್ರೇಯಾ (3) ಮೃತದೇಹ ಕುಟುಬಸ್ಥರಿಗೆ ಹಸ್ತಾಂತರ ಮಾಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.