ಹಾಸ್ಟೆಲ್ ಮತ್ತು ಶಾಲಾ ಮಕ್ಕಳಿಗೆ ಗುಣಮಟ್ಟದ ಅಕ್ಕಿಯನ್ನು ಕೊಡಲಾಗುತ್ತಿದೆ. ಈ ಬಗ್ಗೆ ನಾನು ಮತ್ತೆ ಸಚಿವ ಮಧು ಬಂಗಾರಪ್ಪ ಚರ್ಚೆ ಮಾಡಿದ್ದೇವೆ. ವಿದ್ಯಾರ್ಥಿಗಳಿಗೆ ಯಾವತ್ತೂ ಕಡಿಮೆ ಗುಣಮಟ್ಟದ ಅಕ್ಕಿಯನ್ನು ಪೂರೈಸಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು
ರಾಜ್ಯಾದ್ಯಂತ ಗುಣಮಟ್ಟದ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಯಾವತ್ತೂ ಸಹ ಕಡಿಮೆ ಗುಣಮಟ್ಟದ ಅಕ್ಕಿಯನ್ನು ಪೂರೈಸಿಲ್ಲ ಎಂದರು. ಈ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಿದರೆ ಉತ್ತರ ನೀಡಲಾಗುವುದು ಎಂದರು. ಇನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಿದ್ದಾರೆ. ರಾಜ್ಯದ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳು ಮುಂದುವರೆಯಲಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.