ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2024) ಮೊದಲ ಸುತ್ತಿನ ಪಂದ್ಯಗಳು ಮುಗಿದಿವೆ. ಇದೀಗ ದ್ವಿತೀಯಾರ್ಧದ ಪಂದ್ಯಗಳು ನಡೆಯುತ್ತಿದ್ದು, 2ನೇ ಸುತ್ತಿನಲ್ಲೂ ಭರ್ಜರಿ ಪ್ರದರ್ಶನ ಮುಂದುವರೆಸುವ ಮೂಲಕ ರಾಜಸ್ಥಾನ್ ರಾಯಲ್ಸ್ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನದಲ್ಲಿದೆ.
ರಾಜಸ್ಥಾನ್ ರಾಯಲ್ಸ್ ಇದುವರೆಗೆ 8 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 14 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.698.
8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 10 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +0.972 ನೆಟ್ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
ಸನ್ರೈಸರ್ಸ್ ಹೈದರಾಬಾದ್ ತಂಡವು 8 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್ಆರ್ಹೆಚ್ ತಂಡದ ನೆಟ್ ರನ್ ರೇಟ್ +0.577.
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಆಡಿರುವ 8 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 10 ಅಂಕಗಳೊಂದಿಗೆ +0.148 ನೆಟ್ ರನ್ ರೇಟ್ ಹೊಂದಿದೆ.
8 ಪಂದ್ಯಗಳಲ್ಲಿ 4 ಜಯ ಹಾಗೂ 4 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 5ನೇ ಸ್ಥಾನದಲ್ಲಿದೆ. ಒಟ್ಟು 8 ಅಂಕ ಹೊಂದಿರುವ ಸಿಎಸ್ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.415.
9 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.386 ನೆಟ್ ರನ್ ರೇಟ್ನೊಂದಿಗೆ 8 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
9 ಮ್ಯಾಚ್ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 7ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.974
ಪಂಜಾಬ್ ಕಿಂಗ್ಸ್ ತಂಡವು 8ನೇ ಸ್ಥಾನದಲ್ಲಿದ್ದು, ಆಡಿರುವ 9 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿ 6 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.187.
ಎಂಟು ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ -0.227.
ಆರ್ಸಿಬಿ ತಂಡವು ಇದುವರೆಗೆ 9 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್ನಲ್ಲಿ ಸೋತಿದೆ. ಈ ಮೂಲಕ ಕೇವಲ 4 ಅಂಕ ಸಂಪಾದಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಅಲ್ಲದೆ ಆರ್ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.721.