ನವದೆಹಲಿ: ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಕೇಂದ್ರ ಬಜೆಟ್ ನ್ನು ಇಂದು ಮಂಡನೆ ಮಾಡಿದ್ದು, ಈ ಮೂಲಕ ಮೊರಾರ್ಜಿ ದೇಸಾಯಿ ಬಳಿಕ ಸತತ 6 ಬಾರಿ ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಮಂತ್ರಿಯಾಗಿ ದಾಖಲೆ ಬರೆದಿದ್ದಾರೆ. ಅಲ್ಲದೆ, 2019ರಿಂದ ಈವರೆಗೆ ಪೂರ್ಣಾವಧಿ ವಿತ್ತ ಮಂತ್ರಿಯಾಗಿ ಕೆಲಸ ಮಾಡಿದ ದೇಶದ ಮೊದಲ ಮಹಿಳೆ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.
ಸತತ ಐದು ಬಜೆಟ್ಗಳನ್ನು ಮಂಡಿಸಿರುವ ಮನಮೋಹನ್ ಸಿಂಗ್, ಅರುಣ್ ಜೇಟ್ಲಿ, ಪಿ.ಚಿದಂಬರಂ ಹಾಗೂ ಯಶವಂತ್ ಸಿನ್ಹಾ ಅವರ ದಾಖಲೆಗಳನ್ನೂ ನಿರ್ಮಲಾ ಸೀತಾರಾಮನ್ ಅವರು ಮುರಿದಿದ್ದಾರೆ. ಇದು ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಆಗಿದ್ದು, ಚುನಾವಣೆಗೂ ಮುನ್ನ ಮಂಡಿಸಲಿರುವ ಬಜೆಟ್ ಆಗಿರುವುದರಿಂದ ಇದು ಪೂರ್ಣ ಪ್ರಮಾಣದ ಬಜೆಟ್ ಆಗಿರದೆ ಮಧ್ಯಂತರ ಬಜೆಟ್ ಆಗಿದೆ.