ಕೆ.ಆರ್.ಪುರ: ಗ್ಯಾಸ್ ಸಿಲಿಂಡರ್, ಅಡುಗೆ ಎಣ್ಣೆ, ಪೆಟ್ರೋಲ್, ಡಿಸೇಲ್ ಸೇರಿದಂತೆ ಪ್ರತಿ ವಸ್ತುಗಳ ಬೆಲೆ ಗಗನಕ್ಕೇರಿದೆ. ಬಡವರ ಬದುಕನ್ನು ಮೂರಾಬಟ್ಟೆ ಮಾಡಿದ ಬಿಜೆಪಿ ಸರ್ಕಾರದ ಜನಪ್ರತಿನಿಧಿಗಳು ಯಾವ ಮುಖ ಹೊತ್ತು ಮತಕೇಳಲು ಮನೆ ಮನೆಗೆ ಹೋಗುತ್ತಿದ್ದಾರೆ ಎಂದು ತಮಿಳುನಾಡಿನ ತಿರುವಳ್ಳುರುಲೋಕಸಭಾ ಸದಸ್ಯ ಕೆ.ಜಯಕುಮಾರ್ ಕಿಡಿಕಾರಿದರು.
ಕೆ.ಆರ್.ಪುರ ಕ್ಷೇತ್ರದ ಮಹದೇವಪುರ ಗ್ರಾಮ,ನಾರಾಯಣಪುರ, ಗಂಗಮ್ಮದೇವಾಸ್ಥಾನ ರಸ್ತೆ,ಮುನಿರೆಡ್ಡಿ ಬಡಾವಣೆ,ಉದಯನಗರ ,ಚಿಕ್ಕ ಸುಬ್ಬಣ್ಣ ರಸ್ತೆ,ಮೆತ್ರಿ ಶಾಲೆ ಸಮೀಪ,ನೇತ್ರಾವತಿ ಬಡಾವಣೆ,ಗಂಗಪ್ಪ ಬಡಾವಣೆ,ಪೈ ಲೇಔಟ್ ಸೇರಿದಂತೆ ವಿವಿಧೆಡೆ ಪ್ರಚಾರ ನಡೆಸಿ ಮಾತನಾಡಿದರು ಅವರು
ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಅಚ್ಛೇದಿನ್ ಕೊಡುವುದಾಗಿ ಜನರಿಗೆ ಮಂಕುಬೂದಿ ಎರಚಿ ಅಧಿಕಾರಕ್ಕೆ ಬಂದು ಬಡವರ ಜೀವನದ ಮೇಲೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದರು. ಪ್ರತಿ ಕಾಮಗಾರಿಯಲ್ಲೂ ಕಮಿಷನ್, ನೇಮಕಾತಿಯಲ್ಲಿ ಅಕ್ರಮ, ಚುನಾವಣೆಯಲ್ಲಿ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲವಾಗಿದ್ದು, ಇಂತಹ 40 ಪರ್ಸೆಂಟ್ ಕಮೀಷನ್ ಸರ್ಕಾರದಿಂದ ನಾವುಗಳು ಇನ್ನೇನು ಅಭಿವೃದ್ಧಿ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಆಕ್ರೋಶದ ನುಡಿಗನ್ನಾಡಿದರು.
ರಾಜ್ಯದಲ್ಲಿ ಇನ್ನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಕಾಂಗ್ರೆಸ್ ಪಕ್ಷ 6 ಗ್ಯಾರಂಟಿಗಳನ್ನು ನೀಡುವ ಮೂಲಕ ಜನಸ್ನೇಹಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಹೀಗಾಗಿ ಕ್ಷೇತ್ರದ ಮತದಾರರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ನಾರಾಯಣಸ್ವಾಮಿ,ಕೆಪಿಸಿಸಿ ಸದಸ್ಯ ನಾರಾಯಣಸ್ವಾಮಿ, ಬ್ಲಾಕ್ ಅಧ್ಯಕ್ಷ ಅರಳಪ್ಪ,ವಾರ್ಡನ ಅಧ್ಯಕ್ಷ ನಾಗೇಶ್ ಗೌಡ ಇದ್ದರು.