ಹುಬ್ಬಳ್ಳಿ:- ಬೇಲೆಕೇರಿ ಅದಿರು ನಾಪತ್ತೆ ಪ್ರಕರಣವು ಭ್ರಷ್ಟ ಕಾಂಗ್ರೆಸ್ ಗೆ ಹಿಡಿದ ಕೈಗನ್ನಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಭ್ರಷ್ಟಾಚಾರ ಎನ್ನುವುದು ಕಾಂಗ್ರೆಸ್ ಪಕ್ಷದ ರಕ್ತದಲ್ಲೇ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,200 ಕೋಟಿ ರೂ. ಮೌಲ್ಯದ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಕೈಗನ್ನಡಿ ಎಂದು ವಾಗ್ದಾಳಿ ಮಾಡಿದ್ದಾರೆ.
ಭ್ರಷ್ಟಾಚಾರ ಎನ್ನುವುದು ಕಾಂಗ್ರೆಸ್ ಪಕ್ಷದ ರಕ್ತದಲ್ಲೇ ಇದೆ. ಬೇಲೇಕೇರಿ ಕಬ್ಬಿಣದ ಅದಿರು ನಾಪತ್ತೆ ಪ್ರಕರಣದಿಂದ ಮತ್ತೆ ಇದು ಸಾಬೀತಾಗಿದೆ.
200 ಕೋಟಿ ರೂಪಾಯಿ ಮೌಲ್ಯದ 39,700 ಮೆಟ್ರಿಕ್ ಟನ್ ಅದಿರು ಅಕ್ರಮವಾಗಿ ಚೀನಾಕ್ಕೆ ರಫ್ತು ಮಾಡಿದ್ದ ಪ್ರಕರಣವನ್ನು ಸಿಬಿಐ ಭೇದಿಸಿದೆ. ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತು ಇಬ್ಬರು ಸಹಚರರನ್ನು ಬಂಧಿಸಲು ಆದೇಶಿಸಿದ ಜನಪ್ರತಿನಿಧಿ ನ್ಯಾಯಾಲಯ ನ್ಯಾಯವನ್ನು ಎತ್ತಿ ಹಿಡಿದಿದೆ ಎಂದು ಹೇಳಿದ್ದಾರೆ.