ಬೆಂಗಳೂರು: ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರವೊಂದು ಬಿದ್ದು ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ರಿಡ್ಕಂಡ್ ಸರ್ಕಲ್ ನಲ್ಲಿ ನಡೆದಿದೆ.ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಆಟೋ ಮೇಲೆ ಬಿರುಗಾಳಿಗೆ ಏಕಾಏಕಿ ಮರ ಮುರಿದು ಬಿದ್ದಿದೆ. ಆಟೋ ಸಂಪೂರ್ಣ ಜಖಂಗೊಂಡಿದ್ದು, ಆಟೋ ಚಾಲಕನ ಬಲಗಾಲು ಮುರಿದಿದೆ..
ಚಾಲಕ ದಿವಾಕರ್ ಎಂಬುವವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಇನ್ನು ಈ ಘಟನೆ ಮಾಸುವ ಕೆಲವೇ ಗಂಟೆಗಳಲ್ಲಿ ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಮತ್ತೊಂದು ಕಾರ್ ವೊಂದರ ಮೇಲೆ ಮರ ಬಿದ್ದು ಕಾರ್ ಸಂಪೂರ್ಣವಾಗಿ ಜಖ್ಖಮ್ ಆಗಿದೆ.
ನಗರದ ಕ್ವೀನ್ಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸುವಂತೆ ಸರ್ಕಾರ ಆದೇಶ ನೀಡಿದ್ದರೂ ಬಿಬಿಎಂಪಿ ಒಣ ಮರಗಳನ್ನು ತೆರವು ಮಾಡದಿರುವುದೇ ಇಂತಹ ಅನಾಹುತಕ್ಕೆ ಕಾರಣವಾಗಿದೆ. ಬಿಬಿಎಂಪಿ ನಿರ್ಲಕ್ಷ್ಯದಿಂದಲೇ ಅವಘಡ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ..