ಲಂಡನ್: ಉನ್ನತ ವ್ಯಾಸಂಗಕ್ಕಾಗಿ ಹೈದರಾಬಾದ್ನಿಂದ ಲಂಡನ್ ಗೆ ತೆರಳಿದ್ದ ವಿದ್ಯಾರ್ಥಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಲ್ಲಿನ ವೆಂಬ್ಲಿಯ ನೀಲ್ಡ್ ಕ್ರೆಸೆಂಟ್ನಲ್ಲಿ ನಡೆದಿದೆ.
ಹೈದರಾಬಾದ್ ಮೂಲಕ ಕೋತಂ ತೇಜಸ್ವಿನಿ (27) ಎಂಬ ಯುವತಿಯನ್ನು ಬ್ರೆಜಿಲ್ನ ವ್ಯಕ್ತಿಯೊಬ್ಬ ವಸತಿಗೃಹದಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಘಟನೆಯಲ್ಲಿ ತೇಜಸ್ವೀನಿ ಸ್ಥಳದಲ್ಲೇ ಮೃತಪಟ್ಟಿದ್ದು ತೇಜಸ್ವಿನಿ ಜೊತೆ ವಾಸವಿದ್ದು 28 ವರ್ಷ ವಯಸ್ಸಿನ ಇನ್ನೊಬ್ಬ ಯುವತಿಗೂ ಚಾಕುವಿನಿಂದ ಇರಿದಿದ್ದು, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಘಟನೆಗೆ ಸಂಬಂಧಿಸಿದಂತೆ 24 ಮತ್ತು 23 ವರ್ಷದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯು ಮಾದಕ ವ್ಯಸನಿಯಾಗಿದ್ದು, ತೇಜಸ್ವಿನಿಯಿಂದ ಹಣ ವಸೂಲಿ ಮಾಡಲು ಯತ್ನಿಸಿದ್ದ. ಆಕೆ ನಿರಾಕರಿಸಿದಾಗ ಆತ ಚಾಕುವಿನಿಂದ ಇರಿದಿದ್ದಾನೆ ಎಂದು ತಿಳಿದುಬಂದಿದೆ ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಹೇಳಿದ್ದಾರೆ.
ವಿ. ಸತ್ಯನಾರಾಯಣ, ತೇಜಸ್ವಿನಿ ಅವರ ಕುಟುಂಬ ಹೈದರಾಬಾದ್ನ ಚಂಪಾಪೇಟ್ನಲ್ಲಿ ವಾಸವಿದೆ. ತಂದೆ ಎಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದು, ಸ್ವಂತ ಕೃಷಿ ಭೂಮಿಯನ್ನೂ ಹೊಂದಿದ್ದಾರೆ. ಆಕೆ ಇತ್ತೀಚೆಗೆ ಲಂಡನ್ ನಲ್ಲಿ ತನ್ನ ಎಂಎಸ್ಸಿ ಪದವಿ ಪೂರ್ಣಗೊಳಿಸಿದ್ದಳು. ಒಂದು ತಿಂಗಳ ಹಿಂದೆಯಷ್ಟೇ ಭಾರತಕ್ಕೆ ಭೇಟಿ ನೀಡಿ, ಬಳಿಕ ಲಂಡನ್ಗೆ ಮರಳಿದ್ದಳು. ಈ ವರ್ಷದ ಮೇ ತಿಂಗಳಲ್ಲಿ ವಾಪಸ್ ಬರಬೇಕಿತ್ತು ಎಂದು ಪೋಷಕರು ತಿಳಿಸಿರುವುದಾಗಿ ಹೇಳಿದ್ದಾರೆ ಎಂದು ಹೈದರಾಬಾದ್ ಪೊಲೀಸ್ ಅಧಿಕಾರಿ ಮಾಹಿತಿ ಹಂಚಿಕೊಂಡಿದ್ದಾರೆ.