ಬೆಂಗಳೂರು: ಈ ಚುನಾವಣೆ ಬಿಜೆಪಿ ಪಾಲಿಗೆ ನಿರಾಶದಾಯಕ ಫಲಿತಾಂಶ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Pralhad Joshi) ಬೇಸರ ಹೊರ ಹಾಕಿದ್ದಾರೆ. ಪಕ್ಷದ ಸೋಲನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ. ಪಕ್ಷದ ಸೋಲಿಗೆ ಕಾರಣವಾದ ಅಂಶಗಳ ಬಗ್ಗೆ ಪರಾಮರ್ಶೆ ಮಾಡಿಕೊಳ್ಳುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಶ್ರಮಿಸುತ್ತೇವೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ಪಕ್ಷದ ಸೋಲಿಗೆ ಬಿ.ಎಲ್.ಸಂತೋಷ್ ಕಾರಣ ಎಂಬ ಆರೋಪವಿದೆ. ಸೋಲಿನ ಹೊಣೆ ರಾಜ್ಯ ಬಿಜೆಪಿ ಘಟಕದ್ದು. ಎಲ್ಲಿ ಏನು ತಪ್ಪಾಗಿದೆ ಅಂತ ನಾವು ವಿಮರ್ಶೆ ಮಾಡುತ್ತೇವೆ. ವಿಧಾನಸಭೆ ಚುನಾವಣೆ ಬೇರೆ, ಲೋಕಸಭೆ ಚುನಾವಣೆ ಬೇರೆ. ಬೇರೆ ಬೇರೆ ವಿಚಾರಗಳಲ್ಲಿ ಈ 2 ಚುನಾವಣೆಗಳು ನಡೆಯುತ್ತವೆ. ಈಗ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ 330ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ ಎಂದರು.