ಬೆಂಗಳೂರು:- ಮಂಡ್ಯ ಬಿಟ್ಟರೆ ಬೇರೆಲ್ಲೂ ಸ್ಪರ್ಧಿಸಲು ನನಗೆ ಅಸಕ್ತಿ ಇಲ್ಲ ಎಂದು ಸುಮಲತಾ ಹೇಳಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾದ ಮೇಲೆ ಯಾರ ಜೊತೆಗೂ ಚರ್ಚಿಸಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ನನಗೆ ಫೋನ್ ಮಾಡಿದ್ದರು. ಮಾತನಾಡಲು ಬರುತ್ತೇನೆ ಎಂದು ಅವರು ಹೇಳಿದ್ದರು. ಆದರೆ, ನಾಳೆಯಿಂದ ಸಂಸತ್ನಲ್ಲಿ ಅಧಿವೇಶನ ನಡೆಯಲಿದೆ. ಹೀಗಾಗಿ ಬುಧವಾರ ನಾನು ದೆಹಲಿಗೆ ಹೋಗುತ್ತಿದ್ದೇನೆ ಎಂದು ಸುಮಲತಾ ಹೇಳಿದ್ದಾರೆ.
ಬಿಜೆಪಿಯಲ್ಲಿ ಕೂಡ ಮಂಡ್ಯ ಬಿಟ್ಟು ಬೇರೆ ಕಡೆ ಟಿಕೆಟ್ ಕೊಟ್ಟರೆ ಸ್ಪರ್ಧಿಸಲು ನನಗೆ ಅಸಕ್ತಿ ಇಲ್ಲ. ನನಗೆ ಮಂಡ್ಯದ ಸೇವೆ ಮಾಡಬೇಕು ಎಂಬ ಹಂಬಲ ಇನ್ನೂ ಇದೆ. ಮಂಡ್ಯದ ಜನ ನನ್ನನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿಕೊಟ್ಟಿದ್ದಾರೆ. ನನ್ನ ಸ್ವಾರ್ಥಕ್ಕೆ ನಾನು ಮಂಡ್ಯದಿಂದ ದೂರ ಸರಿಯುವುದಿಲ್ಲ ಎಂದು ಅವರು ಹೇಳಿದ್ದಾರೆ.