ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗದ ವಿಚಾರ ಕುರಿತು ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಅದರ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಮಾಡುತ್ತಾರೆ. ನನ್ನ ಯಾಕೆ ಒಕ್ಕಲಿಗ ಸಮುದಾಯಕ್ಕೆ ಸೀಮಿತ ಮಾಡುತ್ತೀರಿ. ನಾನು ಹುಟ್ಟಿದ್ದು ಒಕ್ಕಲಿಗ ಸಮುದಾಯದಲ್ಲಿ. ಆದರೆ,
ನಾನು ಎಲ್ಲ ಜಾತಿಗಳನ್ನು ಇಷ್ಟಪಡುವಂತವನು. ನಾನು ರಾಜ್ಯಾದ್ಯಂತ ಓಡಾಡ್ತಿದ್ದೇನೆ. ಬೆಂಗಳೂರಿಗೆ ಸೀಮಿತ ಮಾಡಬೇಡಿ, ನಾನು ಏನು ಡಿ ಕೆ ಶಿವಕುಮಾರ್ ತರಹ ಹೇಳಲ್ಲ. ಸಿಎಂ ಆಗೋದು ಹಣೆಯಲ್ಲಿ ಬರೆದಿರಬೇಕು ಎಂದರು. ಮಂಡ್ಯ ಜಿಲ್ಲೆಯ ಉಸ್ತುವಾರಿ ಯಾರು ಎಂಬ ಪ್ರಶ್ನೆಗೆ ಸಿಎಂ ಇದ್ದಾರೆ. ಬೆಂಗಳೂರು, ಮಂಡ್ಯಕ್ಕೆ ಮುಖ್ಯಮಂತ್ರಿಗಳೇ ಇದ್ದಾರೆ ಎಂದು ಸಚಿವ ಆರ್ ಅಶೋಕ್ ಸ್ಪಷ್ಟಪಡಿಸಿದ್ದಾರೆ.