ಕೋಲ್ಕತ್ತಾ:- ಜನರಿಗಾಗಿ ನಾನು ರಾಜೀನಾಮೆ ಕೊಡಲು ಸಿದ್ಧ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕೋಲ್ಕತ್ತಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ಕೊಟ್ಟು ಮಾತನಾಡಿದ ಅವರು, ಕೊಲೆಯಾದ ವೈದ್ಯರಿಗೆ ನ್ಯಾಯ ಕೊಡಿಸಲು ನಾನು ಸಿಎಂ ಪದವಿಯನ್ನು ತ್ಯಜಿಸಲು ಕೂಡ ಸಿದ್ಧಳಿದ್ದೇನೆ ಎಂದು ಈ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ನನ್ನ ರಾಜೀನಾಮೆಯಿಂದ ಸಾಮಾನ್ಯ ಜನರಿಗೆ ನ್ಯಾಯ ಸಿಗುತ್ತದೆ ಎಂದರೆ ನಾನು ಅದಕ್ಕೂ ಸಿದ್ಧಳಿದ್ದೇನೆ. ಆದರೆ, ಪ್ರತಿಭಟನಾನಿರತರಿಗೆ ನ್ಯಾಯ ಬೇಕಾಗಿಲ್ಲ, ಬದಲಾಗಿ ನನ್ನ ಕುರ್ಚಿಯಷ್ಟೇ ಬೇಕಾಗಿದೆ ಎಂದಿದ್ದಾರೆ.
ಪ್ರತಿಭಟನಾನಿರತ ವೈದ್ಯರನ್ನು ಭೇಟಿ ಮಾಡಲು ರಾಜ್ಯ ಸಚಿವಾಲಯದಲ್ಲಿ 2 ಗಂಟೆಗಳ ಕಾಲ ಕಾದಿದ್ದೇನೆ. ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆರ್ಜಿ ಕರ್ ಆಸ್ಪತ್ರೆ ವೈದ್ಯರ ಕೊಲೆ ಪ್ರಕರಣದಲ್ಲಿ ಜನರಿಗೆ ಅನುಕೂಲವಾಗುವುದಾದರೆ ಮತ್ತು ನ್ಯಾಯ ಸಿಗುತ್ತದೆ ಎಂದಾದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ